ಬೆಂಗಳೂರು(ಸೆ.13): ಕಾವೇರಿ ನದಿ ನೀರು ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎರಡೂ ರಾಜ್ಯದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಕೇಳಿಕೊಳ್ಳುತ್ತೇನೆ. ರಾಜ್ಯ ಸರ್ಕಾರವು ಈ ಸಂಬಂಧ ಮಾತುಕತೆ ನಡೆಸಿ ಶಾಂತಿ ಕಾಪಾಡುವತ್ತ ಕೆಲಸ ಮಾಡುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.
ಕಾವೇರಿ ವಿವಾದವನ್ನು ಬಗೆಹರಿಸುವಂತೆ ನಾವು ಮೋದಿಯವರಲ್ಲಿ ಕೇಳಿಕೊಂಡಿದ್ದೇವೆ. ರೈತರ ಹಿತದೃಷ್ಟಿಯಿಂದ ನಾನು ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದೇನೆ. ಮೋದಿಯವರು ಇದಕ್ಕೆ ಪರಿಹಾರ ನೀಡಬೇಕೆಂದು ಬಯಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.
