ರಾಹುಲ್ ಗಾಂಧಿ ಬಳಿ ಪ್ರಧಾನಿ ಮೋದಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇರುವುದರಿಂದ, ಸರ್ಕಾರವು ಸದನದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿಲ್ಲವೆಂದು ಖರ್ಗೆ ಹೇಳಿದ್ದಾರೆ.

ನವದೆಹಲಿ (ಡಿ.15): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಪಕ್ಷದ ಹಿರಿಯ ಮುಖಂಡರು ಸಮರ್ಥಿಸಿಕೊಂಡಿದ್ದಾರೆ.

ರಾಹುಲ್ ಗಾಂಧಿ ಮಾತುಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲವೆಂದು ಹೇಳಿರುವ ಬಿಜೆಪಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸ್ವತ: ತನ್ನ ಸಚಿವರ ಮಾತನ್ನಾಗಲಿ, ಜನರ ಸಮಸ್ಯೆಯನ್ನಾಗಲಿ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ದು ಹೇಳಿದ್ದಾರೆ.

ರಾಹುಲ್ ಗಾಂಧಿ ಬಳಿ ಪ್ರಧಾನಿ ಮೋದಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇರುವುದರಿಂದ, ಸರ್ಕಾರವು ಸದನದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿಲ್ಲವೆಂದು ಹೇಳಿದ್ದಾರೆ.

ನೋಟು ಅಮಾನ್ಯ ಕ್ರಮದಲ್ಲಿ ಹಗರಣ ನಡೆದಿರುವುದಾಗಿ ಹೇಳಿದ್ದ ರಾಹುಲ್ ಗಾಂಧಿ, ಅದರಲ್ಲಿ ಪ್ರಧಾನಿ ಮೋದಿಯೂ ಭಾಗಿಯಾಗಿರುವ ಬಗ್ಗೆ ತನ್ನ ಬಳಿ ಮಾಹಿತಿಯಿದೆ ಎಂದು ಹೇಳಿದ್ದರು.