ಕಲಬುರಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಬಜೆಟ್ ಮಂಡನೆ ಸರಿಯಲ್ಲ. ಆದರೂ ಪ್ರಧಾನಿ ಮೋದಿ ಹಠ ಹಿಡಿದು ಬಜೆಟ್ ಮಂಡನೆಗೆ ಮುಂದಾಗಿದ್ದಾರೆ, ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿ (ಜ.28): ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಲೋಕಸಭೆ ಕಾಂಗ್ರೆಸ್‌ ಪಕ್ಷದ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಬಜೆಟ್ ಮಂಡನೆ ಸರಿಯಲ್ಲ. ಆದರೂ ಪ್ರಧಾನಿ ಮೋದಿ ಹಠ ಹಿಡಿದು ಬಜೆಟ್ ಮಂಡನೆಗೆ ಮುಂದಾಗಿದ್ದಾರೆ, ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಐದು ರಾಜ್ಯಗಳ ಚುನಾವಣೆಯ ಮೇಲೆ ಬಜೆಟ್ ನೇರ ಪರಿಣಾಮ ಬೀರುತ್ತದೆ‌. ಈ ಬಗ್ಗೆ ಮೋದಿ ಸಮೀಕ್ಷೆ ನಡೆಸಿಯೇ ಬಜೆಟ್ ಸಿದ್ದಪಡಿಸುತ್ತಿದ್ದಾರೆ. ಚುನಾವಣೆ ಘೋಷಣೆಯ ನಂತರ ಬಜೆಟ್ ಮಂಡನೆ ನೈತಿಕವಾಗಿ ಸರಿಯಲ್ಲ, ಕೇಂದ್ರ ಸರ್ಕಾರ ಬಜೆಟ್ ಮಂಡನೆ ಕೈ ಬಿಡಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

ಇದೇ ವೇಳೆ ಸಚಿವ ಜಾರಕಿ ಹೊಳಿ ಮನೆಯ ಮೇಲೆ ನಡೆದ ಐಟಿ ದಾಳಿಯಲ್ಲಿ 150 ಕೋಟಿ ರೂಪಾಯಿ ಪತ್ತೆಯಾಗಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಲು ಖರ್ಗೆ ನಿರಾಕರಿಸಿದ್ದಾರೆ.