2016ರ ಮೇ 29ರಂದು ಕಿರಣ್ ಬೇಡಿ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣ ಸ್ವೀಕರಿಸಿದ್ದರು.

ಪುದುಚೇರಿ(ಜ.07): ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ಕಿರಣ್ ಬೇಡಿ 2018ರ ಮೇನಲ್ಲಿ ತಮ್ಮ ಸ್ಥಾನ ತ್ಯಜಿಸುವುದಾಗಿ ಹೇಳಿದ್ದಾರೆ.

ಸಾಮಾಜಿಕ ಜಾಲ ತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳು ವ್ಯವಹರಿಸಬೇಕೆಂದು ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನೀಡಿದ್ದ ಆದೇಶವನ್ನು ಬೇಡಿ ರದ್ದುಗೊಳಿಸಿದ್ದಕ್ಕೆ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಜತೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ಗೆ ದೂರು ಸಲ್ಲಿಸಿದ ಮಾರನೇ ದಿನವೇ ಲೆಫ್ಟಿನೆಂಟ್ ಗವರ್ನರ್‌ರಿಂದ ಸ್ಥಾನ ತ್ಯಜಿಸುವ ಹೇಳಿಕೆ ಹೊರಬಿದ್ದಿದೆ.

ಹಲವು ವಿಚಾರಗಳಲ್ಲಿ ಮುಖ್ಯಮಂತ್ರಿ ಮತ್ತು ಕಿರಣ್ ಬೇಡಿ ನಡುವೆ ಭಿನ್ನಾಭಿಪ್ರಾಯಗಳು ಇದ್ದವು.

2016ರ ಮೇ 29ರಂದು ಕಿರಣ್ ಬೇಡಿ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣ ಸ್ವೀಕರಿಸಿದ್ದರು.