ಅಮಿರ್ ಖಾನ್ ಪತ್ನಿ ಕಿರಣ್ ರಾವ್ ಅವರ 80 ಲಕ್ಷ ರೂ. ಮೌಲ್ಯದ ಆಭರಣಗಳು ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ಕಳ್ಳತನವಾಗಿದೆ.

ಮುಂಬೈ (ನ.29): ಅಮಿರ್ ಖಾನ್ ಪತ್ನಿ ಕಿರಣ್ ರಾವ್ ಅವರ 80 ಲಕ್ಷ ರೂ. ಮೌಲ್ಯದ ಆಭರಣಗಳು ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ಕಳ್ಳತನವಾಗಿದೆ.

ದುಬಾರಿ ಮೌಲ್ಯದ ನೆಕ್ ಲೇಸ್ ಹಾಗೂ ವಜ್ರದ ಉಂಗುರ ನಾಪತ್ತೆಯಾಗಿರುವುದು ಗೊತ್ತಾಗಿದೆ. ಕೂಡಲೇ ಪೋಲಿಸರಿಗೆ ದೂರು ನೀಡಿದ್ದು ಎಫ್ ಐಆರ್ ದಾಖಲಿಸಲಾಗಿದೆ.

ಪೋಲಿಸರು ತನಿಖೆ ನಡೆಸುತ್ತಿದ್ದಾರೆ.