ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ  ಕೀರ್ತಿ, ಜ್ಞಾನಭಾರತಿ ಕ್ಯಾಂಪಸ್ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ಬೈಕ್ ಗೆ ತಮ್ಮ ಕಾರಿನ  ಹಾರನ್ ಹೊಡೆದಿದ್ದಾರೆ.

ಬೆಂಗಳೂರು(ಮಾ.18): ಬಿಗ್ ಬಾಸ್ ರನ್ನರ್ ಅಪ್ ಕಿರಿಕ್ ಕೀರ್ತಿ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ 10 ಗಂಟೆ ಸುಮಾರಿಗೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಂಪಸ್ ಸಮೀಪ ನಡೆದಿದೆ.

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೀರ್ತಿ, ಜ್ಞಾನಭಾರತಿ ಕ್ಯಾಂಪಸ್ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ಬೈಕ್ ಗೆ ತಮ್ಮ ಕಾರಿನ ಹಾರನ್ ಹೊಡೆದಿದ್ದಾರೆ. ಈ ವೇಳೆ ಪಾನಮತ್ತರಾಗಿದ್ದ ಇಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಾ ಕೀರ್ತಿ ಮತ್ತು ಅವರ ಗೆಳೆಯ ಮಂಜುನಾಥ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ನೆರೆದ ಸಾರ್ವಜನಿಕರು ಪಾನಮತ್ತರಾಗಿದ್ದ ಇಬ್ಬರು ಹಲ್ಲೆಕೋರರನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಇನ್ನು ಘಟನೆ ಸಂಬಂಧ ಕಿರಿಕ್ ಕೀರ್ತಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ, ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.