ಬೆಂಗಳೂರು(ಸೆ.24):ಮಂಗಳೂರು ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಆರೋಪಿಯಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಜೆ ಜಾರ್ಜ್​ ಮತ್ತೆ ಸಂಪುಟ ಸೇರುತ್ತಿದ್ದಾರೆ.

ಸೋಮವಾರ ಬೆಳಿಗ್ಗೆ ರಾಜಭವನದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಜಾರ್ಜ್ ಅವರ ವಿರುದ್ಧದ ಆರೋಪವನ್ನು ಅಲ್ಲಗಳೆದಿದ್ದು, ಬಿ. ರಿಪೋರ್ಟ್ ಸಲ್ಲಿಕೆ ಮಾಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮೊನ್ನೆ ದೆಹಲಿಗೆ ತೆರಳಿದಾಗ ಹೈ ಜಾರ್ಜ್​ರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈ ಕಮಾಂಡ್​ನಿಂದ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದ್ದರು.

ಸೋಮವಾರ ಮತ್ತೆ ಸಿದ್ದರಾಮಯ್ಯ ಸಂಪುಟ ಸೇರಲಿರುವ ಜಾರ್ಜ್ ಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ದೊರೆಯಲಿದೆ.