ಡಿವೈಎಸ್'ಪಿ ನಿಗೂಢ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜಾರ್ಜ್ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ದಾಖಲಾತಿಗಳನ್ನು ವಶಕ್ಕೆ ನೀಡುವಂತೆ ಸಿಬಿಐಡಿಗೆ ಸಿಬಿಐ ಪತ್ರ ಬರೆದಿದೆ. ಕೆಲವೇ ದಿನಗಳಲ್ಲಿ ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.
ಬೆಂಗಳೂರು(ಅ.20): ಡಿವೈಎಸ್'ಪಿ ನಿಗೂಢ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜಾರ್ಜ್ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ದಾಖಲಾತಿಗಳನ್ನು ವಶಕ್ಕೆ ನೀಡುವಂತೆ ಸಿಬಿಐಡಿಗೆ ಸಿಬಿಐ ಪತ್ರ ಬರೆದಿದೆ. ಕೆಲವೇ ದಿನಗಳಲ್ಲಿ ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.
ಸಿಐಡಿ ತನಿಖೆಯಲ್ಲಿ ದೋಷಮುಕ್ತರಾದ ಸಂತರ ನಿರಾಳರಾಗಿದ್ದವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಿರೀಕ್ಷೆಯಂತೆ ಸಿಬಿಐ ಎಫ್'ಐಆರ್ ದಾಖಲಿಸಿದರೆ ಮೂವರಿಗೂ ಬಂಧನ ಭೀತಿ ಸಹ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಸಚಿವರು ಹಾಗೂ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಿಬಿಐ ಈ ಪ್ರಕರಣ ಕೈಗೆತ್ತಿಕೊಂಡಿದೆ. ಜಾರ್ಜ್ ಸೇರಿ ಮೂವರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಆರೋಪದಡಿ ಎಫ್ಐಆರ್ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ನಡೆಸಲಿದೆ.
