ಕೊಡಗಿನಲ್ಲಿ ಕೆಲ ದಿನಗಳ ಹಿಂದೆ ಭಾರೀ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ನಿಟ್ಟಿನಲ್ಲಿ ಕೊಡಗು ಪ್ರವಾಸಕ್ಕೆ ನಿಷೇಧ ಹೇರಲಾಗಿದೆ. 

ಮಡಿಕೇರಿ: ಭಾರೀ ಪ್ರಕೃತಿ ವಿಕೋಪಕ್ಕೆ ಒಳಗಾಗಿರುವ ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರ ಆಗಮನ ಹಾಗೂ ವಾಸ್ತವ್ಯ ನಿಷೇಧವನ್ನು ವಿಸ್ತರಣೆ ಮಾಡಲಾಗಿದೆ. ಆ.31ರವರೆಗೆ ಇದ್ದ ನಿಷೇಧ ಸೆ. 7ರವರೆಗೆ ವಿಸ್ತರಿಸಿ ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲೆಯಲ್ಲಿ ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲ ಹಾಗೂ ಮಳೆ ಕಡಿಮೆಯಾಗದ ಕಾರಣ ಜಿಲ್ಲಾಧಿಕಾರಿ ಈ ನಿರ್ಧಾರ ಮಾಡಿದ್ದಾರೆ. ಅದರಂತೆ ಸೆ.7ರವರೆಗೆ ಹೋಂ ಸ್ಟೇ, ರೆಸಾರ್ಟ್‌ಗಳಲ್ಲಿ ಪ್ರವಾಸಿಗರು ಬಂದು ವಾಸ್ತವ್ಯ ಮಾಡುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.