ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕೊಡಗಿಗೆ ಭೇಟಿ ನೀಡಿದಾಗ ನಡೆದ ಗೊಂದಲಗಳ ಸಂಬಂಧ ಸಿಎಂ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಅನೇಕ ವಿಚಾರಗಳನ್ನು ಗಮನಕ್ಕೆ ತಂದಿದ್ದಾರೆ.

ಬೆಂಗಳೂರು[ಆ.26] ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಗೆ ಪರಿಶೀಲನೆಗಾಗಿ ಆಗಮಿಸಿದ ಸಂದರ್ಭದ ಗೊಂದಲ ಮಾಧ್ಯಮಗಳಲ್ಲೂ ಸುದ್ದಿಯಾಗಿತ್ತು. ಇದಕ್ಕೆ ಒಂದು ರೀತಿಯಲ್ಲಿ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯ ಸರ್ಕಾರವು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ವಿಪತ್ತು ನಿರ್ವಹಣಾ ಸಂಸ್ಥೆಗಳು ಹಾಗೂ ಸ್ವಯಂ ಸೇವಕರ ನೆರವಿನಲ್ಲಿ ಕಾರ್ಯಾಚರಣೆ ಮಾಡಿದ್ದೇವೆ. ಮಾಡುತ್ತಿದ್ದದೇವೆ. ಪುನರ್ ವಸತಿ ನೀಡಲು ಸರಕಾರ ಬದ್ಧವಿದೆ ಎಂದು ಹೇಳಿದ್ದಾರೆ.

ಸಚಿವ ಮಹೇಶ್ ವಿರುದ್ಧ ರಕ್ಷಣಾ ಸಚಿವೆ ಮತ್ತೆ ಕೋಪ-ತಾಪ

ಪ್ರವಾಹ ಪ್ರವಾಸೋದ್ಯಮದ ಮೇಲೂ ಕೆಟ್ಟ ಪರಿಣಾಮ ಬೀರಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಅನಾಹುತ ಸಂಭವಿಸಿದ ಮೊದಲ ದಿನದಿಂದಲೇ ಕೊಡಗು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಉಸ್ತುವಾರಿ ವಹಿಸಿ ಶ್ರಮಿಸಿದ್ದಾರೆ. ಇನ್ನು ಮುಂದೆಯೂ ಕೇಂದ್ರ ಸರಕಾರ ನಮಗೆ ನೆರವು ನೀಡುತ್ತದೆ ಎಂಬ ಭರವಸೆ ಇದೆ ಎಂದಿದ್ದಾರೆ.

Scroll to load tweet…