ದುಬೈ(ಸೆ.06): ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತ ಬ್ಯಾಟಿಂಗ್ ಸ್ಟಾರ್ ವಿರಾಟ್ ಕೊಹ್ಲಿ ಸತತವಾಗಿ ಎರಡನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಸಫಲರಾಗಿದ್ದಾರೆ.
ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಮತ್ತೊಂದೆಡೆ ಭಾರತದ ಆರಂಭಿಕರಾದ ಶಿಖರ್ ಧವನ್ 8ನೇ ಸ್ಥಾನದಲ್ಲಿದ್ದಾರೆ.
ಹಾಗೇ ಟೀಮ್ ಇಂಡಿಯಾದ ಮತ್ತೊರ್ವ ಆರಂಭಿಕ ರೋಹಿತ್ ಶರ್ಮಾ ಒಂದು ಸ್ಥಾನ ಕೆಳಗೆ ಇಳಿಯುವ ಮೂಲಕ 7ನೇ ಸ್ಥಾನಕ್ಕಿಳಿದಿದ್ದಾರೆ. ಒಟ್ಟು 110 ಅಂಕಗಳಿಸಿರುವ ಭಾರತ ತಂಡ ಏಕದಿನ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
