ಕಾಂಗ್ರೆಸ್ ಸಮಾವೇಶಕ್ಕೆ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು. ಕೊಲ್ಲೂರು ದೇವಸ್ಥಾನದಲ್ಲಿ ಆಹಾರ ತಯಾರು ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ವಿತರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಬೈಂದೂರು(ಜ.08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಕೊಲ್ಲೂರು ದೇವಸ್ಥಾನದ ಊಟವನ್ನು ಬಳಸಿಕೊಂಡ ಕ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ ಸಮಾವೇಶಕ್ಕೆ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು. ಕೊಲ್ಲೂರು ದೇವಸ್ಥಾನದಲ್ಲಿ ಆಹಾರ ತಯಾರು ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ವಿತರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕೆಲ ತಿಂಗಳುಗಳ ಹಿಂದಷ್ಟೇ ರಾಜ್ಯ ಸರ್ಕಾರ ಕಲ್ಲಡ್ಕ ಶಾಲೆಗೆ ಕೊಲ್ಲೂರು ದೇವಸ್ಥಾನದಿಂದ ನೀಡುತ್ತಿದ್ದ ಊಟವನ್ನು ನಿಲ್ಲಿಸಲಾಗಿತ್ತು. ಸರ್ಕಾರದ ಈ ಕ್ರಮವನ್ನು ಬಿಜೆಪಿ ಕಟುವಾಗಿ ಟೀಕಿಸಿತ್ತು. ಆದರೆ ಇದೀಗ ದೇವಸ್ಥಾನದ ಊಟವನ್ನು ಕಾಂಗ್ರೆಸ್ ಸಮಾವೇಶದಲ್ಲಿ ಬಳಸಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.