ಬೆಂಗಳೂರು [ಜು.31]: ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿ ಶಾಸಕ ಸ್ಥಾನದಿಂದ ಅನರ್ಹಗೊಂಡ ಕಾಂಗ್ರೆಸ್‌ನ ಹನ್ನೊಂದು ಅತೃಪ್ತ ಶಾಸಕರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ 23 ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳನ್ನು ಕೆಪಿಸಿಸಿ ಮಂಗಳವಾರ ವಜಾಗೊಳಿಸಿದೆ.

ಆಯಾ ಜಿಲ್ಲಾ ಕಾಂಗ್ರೆಸ್ ಸಮಿತಿಯೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಸಹಕರಿಸದ ಹಾಗೂ ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಪಕ್ಷ ಬಲವರ್ಧನೆಯಲ್ಲಿ ಪಾಲ್ಗೊಳ್ಳದಿರುವ ಆರೋಪದ ಮೇಲೆ ಈ 23 ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳನ್ನು ವಜಾಗೊಳಿ ಸಿದೆ. 

ಜತೆಗೆ ಆ ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯನ್ನು ಕೂಡ ವಿಸರ್ಜನೆಗೊಳಿಸಿ ಕೆಪಿಸಿಸಿ ಆದೇಶ ಹೊರಡಿಸಿದೆ.