ಬೆಂಗಳೂರು (ಸೆ.27): ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ಆದೇಶದ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸುಪ್ರಿಂ ಕೋರ್ಟ್ ಆದೇಶ ದುರದೃಷ್ಟಕರ ಎಂದು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮಿಳುನಾಡಿಗೆ ನೀರು ಬಿಡಬಾರದು ಎಂದು ಇಂದು ನಡೆದ ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿಯಲ್ಲಿ ತೀರ್ಮಾನ ಮಾಡಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಸರ್ವಪಕ್ಷದ ಸಭೆ ಕರೆಯುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಕಾರ್ಯಕಾರಿಣಿಯಲ್ಲಿ ನಿರ್ಧರಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.