ಬೆಂಗಳೂರು, (ಮೇ.21):  ಕಾಂಗ್ರೆಸ್​ ನಾಯಕರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದ ಶಿವಾಜಿನಗರ ಶಾಸಕ ರೋಷನ್ ಬೇಗ್‌ಗೆ ಕಾರಣ ಕೇಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ ಘೋರ್ಪಡೆ ನೋಟಿಸ್ ಜಾರಿ ಮಾಡಿದ್ದಾರೆ.

"

ರೋಷನ್ ಬೇಗ್ ಸಿಟ್ಟಿಗೆ ಕಾರಣ ಒಂದಲ್ಲ! ಮುಸ್ಲಿಮ್ ನಾಯಕನ ಮುಂದಿನ ನೆಲೆ ಕಮಲ?

ತಮ್ಮ ನಡವಳಿಕೆಯು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಲಾಗುತ್ತದೆ. ತಾವು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದೀರ. ಅಲ್ಲದೇ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಗಳನ್ನ ನೀಡಿದ್ದೀರಿ. 

ಇದನ್ನ ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತೀರ್ಮಾನಿಸಿದ್ದೇವೆ. ಈ ಸಂಬಂಧ ಒಂದು ವಾರದೊಳಗೆ ಕಾರಣ ನೀಡಬೇಕು ಎಂದು ನೋಟಿಸ್​ನಲ್ಲಿ ಉಲ್ಲೇಖ ಮಾಡಲಾಗಿದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.