ಇವತ್ತು ಕೆಪಿಸಿಸಿಗೆ ನೂತನ ಅಧ್ಯಕ್ಷರು ಯಾರು ಎನ್ನುವ ಕುತೂಹಲಕ್ಕೆ ತೆರ ಬೀಳಲಿದೆ. ಕಾಂಗ್ರೆಸ್ ಹೈಕಮಾಂಡ್ ಅಧ್ಯಕ್ಷರ ಹೆಸರನ್ನ ಸಂಜೆಯೊಳಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ ಎನ್ನಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್​, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ನವದೆಹಲಿ(ಮೇ.29): ಇವತ್ತು ಕೆಪಿಸಿಸಿಗೆ ನೂತನ ಅಧ್ಯಕ್ಷರು ಯಾರು ಎನ್ನುವ ಕುತೂಹಲಕ್ಕೆ ತೆರ ಬೀಳಲಿದೆ. ಕಾಂಗ್ರೆಸ್ ಹೈಕಮಾಂಡ್ ಅಧ್ಯಕ್ಷರ ಹೆಸರನ್ನ ಸಂಜೆಯೊಳಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ ಎನ್ನಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್​, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ಇವತ್ತು ಕೆಪಿಸಿಸಿ ಕ್ಲೈಮ್ಯಾಕ್ಸ್​ಗೆ ತೆರೆ ಎಳೆಯುವ ಉದ್ದೇಶದಿಂದಲೇ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ಮುಖಂಡರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಹೀಗಾಗಿಯೇ ಕಾಂಗ್ರೆಸ್ ಹಿರಿಯ ಮುಖಂಡರು ದೆಹಲಿಗೆ ಆಗಮಿಸಿದ್ದು ನಾನಾ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ದೆಹಲಿಯಲ್ಲಿ ‘ಕೈ’ ಕಸರತ್ತು

ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವೡ, ಕೆಪಿಸಿಸಿ ಹುದ್ದೆ ರೇಸ್​ನಲ್ಲಿರೋ ಸಚಿವ ಡಿ ಕೆ ಶಿವಕುಮಾೡ, ಸಚಿವರಾದ ಕೆ.ಜೆ. ಜಾರ್ಜ್, ಆೡ.ವಿ. ದೇಶಪಾಂಡೆ, ರಮೇಶ್​ ಕುಮಾೡ, ರೋಷನ್ ಬೇಗ್, ಎಂ.ಬಿ. ಪಾಟೀಲ್ ಹಾಗೂ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಕೆ ಹೆಚ್ ಮುನಿಯಪ್ಪ ಸೇರಿದಂತೆ ಹಲವರು ಈಗಾಗಲೇ ಡೆಲ್ಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಕೆಪಿಸಿಸಿ ಅಧ್ಯಕ್ಷರು ಯಾರಾಗ್ತಾರೆ ಅನ್ನೋ ಗುಟ್ಟನ್ನು ಹೈಕಮಾಂಡ್ ಇನ್ನೂ ಬಿಟ್ಟುಕೊಟ್ಟಿಲ್ಲ. ಆದರೆ, ಆಕಾಂಕ್ಷಿಗಳು ಮಾತ್ರ ಅಂತಿಮ ಹಂತದವರೆಗೂ ಲಾಬಿ ನಡೆಸುತ್ತಿದ್ದಾರೆ. ಅದರಲ್ಲೂ ಜಿ. ಪರಮೇಶ್ವರ್ ಹಾಗೂ ಡಿ ಕೆ ಶಿವಕುಮಾರ್ ಮಧ್ಯೆ ತೀವ್ರ ಪೈಪೋಟಿಯಿದೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿ ಕೆ ಶಿವಕುಮಾರ್ ಭೇಟಿಯಾಗಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಇಷ್ಟೆಲ್ಲ ಬೆಳವಣಿಗೆಗಳು ನಡೆದರೂ ಅಂತಿಮವಾಗಿ ಯಾರು ಕೆಪಿಸಿಸಿ ಗದ್ದುಗೆಗೆ ಏರುತ್ತಾರೆ ಎನ್ನುವುದಕ್ಕೆ ಇವತ್ತು ಮಧ್ಯಾಹ್ನದವರೆಗೂ ಕಾಯಲೇಬೇಕು.