ಪಂಜಾಬಿನ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಕೆಪಿಎಸ್ ಗಿಲ್ (82) ಇಂದು ಹೃದಯಾಘಾತದಿಂದ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ನವದೆಹಲಿ (ಮೇ.26): ಪಂಜಾಬಿನ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಕೆಪಿಎಸ್ ಗಿಲ್ (82) ಇಂದು ಹೃದಯಾಘಾತದಿಂದ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಮೇ 18 ರಂದು ಗಿಲ್ ರವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಧ್ಯಾಹ್ನ 2.55 ಕ್ಕೆ ಕೊನೆಯುಸಿರೆಳೆದಿದ್ದಾರೆ.

ಕೆಲದಿನಗಳಿಂದ ಗಿಲ್ ರವರು ಕಿಡ್ನಿ ವೈಫಲ್ಯ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಪಂಜಾಬಿನಲ್ಲಿ ಭಯೋತ್ಪಾದನೆಯನ್ನು ಮಟ್ಟ ಹಾಕುವಲ್ಲಿ ವಿವಾದಾತ್ಮಕ ಪಾತ್ರವನ್ನು ನಿಭಾಯಿಸಿದ್ದರು. ಇವರ ಅಪ್ರತಿಮ ಸೇವೆಗೆ 1989 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು. 1995 ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.