ಬಾಗಲಕೋಟೆ :  ಬಾಗಲಕೋಟೆಯಲ್ಲಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ. 

ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ನಾನು ಕುಮಾರಸ್ವಾಮಿ ಅವರನ್ನು ಟೀಕೆ ಮಾಡುವುದಕ್ಕೆ ಹೋಗುವುದಿಲ್ಲ.  ಗ್ರಾಮ ವಾಸ್ತವ್ಯ ಎನ್ನುವುದು ಒಂದು ಒಳ್ಳೆಯ ಕಾರ್ಯಕ್ರಮ ಎಂದಿದ್ದಾರೆ. 

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೇಜು ಕುರ್ಚಿಗಳು ಸರಿಯಾಗಿಲ್ಲ. ಸರ್ಕಾರಿ ಶಾಲೆಗಳನ್ನು ಸುಧಾರಣೆ ಮಾಡಿದರೆ ಒಳಿತು. ಗ್ರಾಮ ವಾಸ್ತವ್ಯದಿಂದ ಸರ್ಕಾರಿ ಶಾಳೆಗಳ ಅಭಿವೃದ್ಧಿ ಆಗಲಿ. ಸರ್ಕಾರಿ ಶಾಲೆಗೆ ಬಡಮಕ್ಕಳು ಹೋಗುತ್ತಾರೆ ಎಂದು ಗ್ರಾಮ ವಾಸ್ತವ್ಯದ ಬಗ್ಗೆ ಉತ್ತಮ ಮಾತುಗಳನ್ನಾಡಿದ್ದಾರೆ. 

ಅಲ್ಲದೇ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಬಳಿಕ ರಾಜ್ಯದ ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡಲಿ ಎಂದು ಬಿಜೆಪಿ ನಾಯಕ ಈಶ್ವರಪ್ಪ ಹೇಳಿದರು.