ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಮ್ಮಾವ್ರ ಗಂಡನಂತಾಗಿದ್ದಾರೆ. ಕಾಂಗ್ರೆಸ್‌ ಆಣತಿಯಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ವ್ಯಂಗ್ಯವಾಡಿದರು. 

ಶಿವಮೊಗ್ಗ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಮ್ಮಾವ್ರ ಗಂಡನಂತಾಗಿದ್ದಾರೆ. ಕಾಂಗ್ರೆಸ್‌ ಆಣತಿಯಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ವ್ಯಂಗ್ಯವಾಡಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿಯೋ ಇಲ್ಲವೋ ಎಂಬ ಅನುಮಾನ ಕಾಡತೊಡಗಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇದುವರೆಗೂ ಟೇಕಾಫ್‌ ಆಗಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ನಿಂತ ನೀರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರದಲ್ಲಿ ಈಗಿರುವ ಗೊಂದಲ ನೋಡಿದರೆ 6 ತಿಂಗಳು ಅಧಿಕಾರದಲ್ಲಿರುತ್ತದೆಯೇ ಎಂಬ ಅನುಮಾನ ಕಾಡುತ್ತದೆ. ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಮೀಜಿಗಳನ್ನು ಮುಂದಿಟ್ಟುಕೊಂಡು ಜಾತಿ ರಾಜಕಾರಣ ಮಾಡತೊಡಗಿದ್ದಾರೆ ಎಂದು ದೂರಿದರು.