ಬೆಂಗಳೂರಿನಲ್ಲಿ 24 ಗಂಟೆಗಳಲ್ಲಿ ಭಾರಿ ಮಳೆ : ಪ್ರವಾಹ ಭೀತಿ

KSNDMC issues flood alert for Bengaluru's low lying areas
Highlights

ಈಗಾಗಲೇ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು ಹಲವೆಡೆ  ಭಾರಿ ಪ್ರಮಾಣದಲ್ಲಿ ವರುಣನ ಆರ್ಭಟವಿದೆ. ಇದೀಗ ಬೆಂಗಳೂರಿನಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪಗಳ ನಿರ್ವಹಣಾ ಕೇಂದ್ರವು ಮುನ್ನೆಚ್ಚರಿಕೆ ನೀಡಿದೆ. 

ಬೆಂಗಳೂರು:  ಈಗಾಗಲೇ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು ಹಲವೆಡೆ  ಭಾರಿ ಪ್ರಮಾಣದಲ್ಲಿ ವರುಣನ ಆರ್ಭಟವಿದೆ. ಇದೀಗ ಬೆಂಗಳೂರಿನಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪಗಳ ನಿರ್ವಹಣಾ ಕೇಂದ್ರವು ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. 

ನಗರದ ತಗ್ಗು ಪ್ರದೇಶಗಳು ಹಾಗೂ ಕೆಲವು ಆಯ್ದ ಪ್ರದೇಶಗಳು ಅತ್ಯಧಿಕ ಪ್ರಮಾಣದಲ್ಲಿ ನೀರಿನಿಂದಾವೃತವಾಗುವ ಸಾಧ್ಯತೆ  ಇದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು  ಸೂಚಿಸಲಾಗಿದೆ. 

ನಗರದ ಪ್ರಮುಖ ಪ್ರದೇಶಗಳಾದ ರಾಜರಾಜೇಶ್ವರಿ ನಗರ, ಪೂರ್ವ ವಲಯ, ದಕ್ಷಿಣ ವಲಯ, ಮಹಾದೇವಪುರ, ಬೊಮ್ಮನಹಳ್ಳಿ ಪ್ರದೇಶಗಳಲ್ಲಿನ ಜನರು ಹೆಚ್ಚಿನ ಎಚ್ಚರಿಕೆಯಿಂದ ಇರಲು ವಿಪತ್ತು ನಿರ್ವಹಣಾ ಕೇಂದ್ರವು ತಿಳಿಸಿದೆ. ಪಶ್ಚಿಮ ವಲಯದ ಪ್ರದೇಶಗಳಾದ ದಾಸನಪುರ ಸೇರಿದಂತೆ ಕೆಲ ಪ್ರದೇಶಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

ನಗರದಲ್ಲಿ ದಟ್ಟವಾದ ಮೊಡ ಆವರಿಸಿದ್ದು, ಈ ನಿಟ್ಟಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 

loader