ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ | ಕೆಎಸ್‌ಆರ್‌ಟಿಸಿ-ಕಾರು ನಡುವೆ ಡಿಕ್ಕಿ, ನಾಲ್ವರ ಸಾವು | ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
ಹಾಸನ (ಮಾ. 10): ಇಂದು ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಸಾರಿಗೆ ಬಸ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಮಾರನಹಳ್ಳಿ ಬಳಿ ನಡೆದಿದೆ.
ಮಂಗಳೂರು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಸಕಲೇಶಪುರದ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಈ ನಡೆದಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಗದೀಶ್ (30), ಗೌರಮ್ಮ (45), ಚನ್ನಯ್ಯ (50) ಮೃತಪಟ್ಟ ದುರ್ದೈವಿಗಳು. ಇವರು ಬೆಂಗಳೂರಿನ ರಾಜಾನುಕುಂಟೆಯವರು ಎಂದು ತಿಳಿದು ಬಂದಿದೆ.
