ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಬರುತ್ತಿದ್ದ ಕೆಎಸ್'ಆರ್'ಟಿಸಿ ಬಸ್'ಗೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ಬಳಿ ಕ್ರೂಸರ್'ಗೆ ಡಿಕ್ಕಿಯಾಗಿದೆ.

ಬಾಗಲಕೋಟೆ(ಸೆ.08): ಇಂದಯ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು ಕೆಎಸ್'ಆರ್'ಟಿಸಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಎರಡು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಬರುತ್ತಿದ್ದ ಕೆಎಸ್'ಆರ್'ಟಿಸಿ ಬಸ್'ಗೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ಬಳಿ ಕ್ರೂಸರ್'ಗೆ ಡಿಕ್ಕಿಯಾಗಿದೆ. ಈ ವೇಳೆ ಕ್ರೂಸರ್'ನಲ್ಲಿದ್ದ 6 ಮಂದಿಯು ಸ್ಥಳದಲದಲ್ಲಿಯೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವವರನ್ನು ಬೀಳಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.