. ಚುನಾವಣಾ ಗುರುತಿನ ಚೀಟಿ, ಆಧಾರ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯ, ಕೆಎಸ್'ಆರ್ಟಿಸಿ ವಿತರಿಸುವ ಗುರುತಿನ ಚೀಟಿ ತೋರಿಸಿ ಟಿಕೆಟ್ ಪಡೆದು ಪ್ರಯಾಣಿಸಬಹುದು.
ಬೆಂಗಳೂರು(ಫೆ.22): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದೆ. ವೇಗದೂತ, ರಾಜಹಂಸ, ಸುವಿಹಾರಿ ಬಸ್ಗಳಲ್ಲಿ ಹಿರಿಯರು ಶೇ.25 ರಷ್ಟು ರಿಯಾಯಿತಿ ದರಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಚುನಾವಣಾ ಗುರುತಿನ ಚೀಟಿ, ಆಧಾರ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯ, ಕೆಎಸ್'ಆರ್ಟಿಸಿ ವಿತರಿಸುವ ಗುರುತಿನ ಚೀಟಿ ತೋರಿಸಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಈ ಯೋಜನೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅನ್ವಯವಾಗಲಿದೆ.
