ಭಾರತದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು  ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್  ಅವರನ್ನ  ಪತ್ನಿ ಹಾಗೂ ತಾಯಿ ಇಂದು ಭೇಟಿ ಮಾಡಲಿದ್ದಾರೆ.

ನವದೆಹಲಿ (ಡಿ.25): ಭಾರತದ ಪರ ಬೇಹುಗಾರಿಕೆ ಮಾಡಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನ ಪತ್ನಿ ಹಾಗೂ ತಾಯಿ ಇಂದು ಭೇಟಿ ಮಾಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತಂತೆ ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮೊಹಮ್ಮದ್ ಫೈಸಲ್ ಟ್ವೀಟ್ ಮಾಡಿದ್ದಾರೆ. ಇಂದು ಜಾಧವ್ ಅವರ ಪತ್ನಿ ಹಾಗೂ ತಾಯಿ ಪಾಕಿಸ್ತಾನಕ್ಕೆ ಪ್ರಯಾಣಿಸಲಿದ್ದು, ಇಸ್ಲಾಮಾಬಾದ್'ಗೆ ತೆರಳಿ ಅಲ್ಲಿನ ಜೈಲಲ್ಲಿ ಇರುವ ಜಾಧವ್'ರನ್ನು ಭೇಟಿ ಮಾಡಿ ಸಂಜೆಯೇ ಭಾರತಕ್ಕೆ ಮರಳಲಿದ್ದಾರೆ. ಅವರೊಂದಿಗೆ ಭಾರತೀಯ ರಾಯಭಾರಿ ಅಧಿಕಾರಿಗಳು ಕೂಡ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.