ಕುಮಾರ್ ಬಂಗಾರಪ್ಪ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕ್ಷೇತ್ರದಲ್ಲಿ ಹರಿದಾಡುತ್ತಿರುವ ಗಾಳಿಸುದ್ದಿಗೆ ಬಲಬಂದಂತಾಗಿದೆ.

ಶಿವಮೊಗ್ಗ(ಫೆ.27): ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಕಾಂಗ್ರೆಸ್'ಗೆ ಗುಡ್'ಬೈ ಹೇಳಿ ತಿಂಗಳು ಕಳೆಯುವುದರೊಳಗಾಗಿ ಕಾಂಗ್ರೆಸ್'ನ ಮತ್ತೊಂದು ವಿಕೆಟ್ ಪತನವಾಗುವುದು ಬಹುತೇಕ ಖಚಿತವಾದಂತಾಗಿದೆ.

Add Asianetnews Kannada as a Preferred SourcegooglePreferred

ಇಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ 74ನೇ ಹುಟ್ಟುಹಬ್ಬಕ್ಕೆ ಶುಭಕೋರಲು ತೆರಳಿದ್ದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿದ್ದಾರೆ.

ಬಿಎಸ್'ವೈ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ನಾನು ಮತ್ತು ನನ್ನ ಬೆಂಬಲಿಗರು ಬಿಎಸ್'ವೈ ಜೊತೆಯಿರಲು ನಿರ್ಧರಿಸಿದ್ದೇವೆ. ಆದಷ್ಟು ಬೇಗ ಬಿಜೆಪಿ ಸೇರ್ಪಡೆ ಕುರಿತು ಸುದ್ದಿಗೋಷ್ಟಿ ಕರೆದು ಅಂತಿಮ ನಿರ್ಧಾರ ತಿಳಿಸುತ್ತೇನೆಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.

ಈ ಭೇಟಿಯು ಕುಮಾರ್ ಬಂಗಾರಪ್ಪ ಕಾಂಗೈ ತೊರೆದು ಬಿಜೆಪಿ ಸೇರಲಿದ್ದಾರೆ, ಹಾಗೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕ್ಷೇತ್ರದಲ್ಲಿ ಹರಿದಾಡುತ್ತಿರುವ ಗಾಳಿಸುದ್ದಿಗೆ ಬಲಬಂದಂತಾಗಿದೆ.