ಅವರು 21 ವರ್ಷದ ಕಾಂಗ್ರೆಸ್ ಪಕ್ಷದ ಒಡನಾಟದಿಂದ ದೂರವಾಗುತ್ತಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾದ ಪರಮೇಶ್ವರ್ ಗೆ ರಾಜೀನಾಮೆ ಪತ್ರ ಕಳುಹಿಸಿಕೊಡುತ್ತಿದ್ದೇನೆ.
ಕಾಂಗ್ರೆಸ್ ಗೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಗುಡ್ ಬೈ ಹೇಳಿದ್ದಾರೆ. ಇಂದು ಬಿಜೆಪಿ ಸೇರ್ಪಡೆ ಕುರಿತು ಕುಮಾರ್ ಬಂಗಾರಪ್ಪ ಅಧಿಕತವಾಗಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು 21 ವರ್ಷದ ಕಾಂಗ್ರೆಸ್ ಪಕ್ಷದ ಒಡನಾಟದಿಂದ ದೂರವಾಗುತ್ತಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾದ ಪರಮೇಶ್ವರ್ ಗೆ ರಾಜೀನಾಮೆ ಪತ್ರ ಕಳುಹಿಸಿಕೊಡುತ್ತಿದ್ದೇನೆ.ಕಾಂಗ್ರೆಸ್ ದೂರವಾಗಲು ಇರುವ ಕಾರಣಗಳನ್ನು ರಾಜೀನಾಮೆ ಪತ್ರದಲ್ಲಿ ನಮೂದಿಸಿದ್ದೇನೆ ಎಂದು ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ. ಕುಮಾರ್ ಬಂಗಾರಪ್ಪ ಗೆ ಶಿವಮೊಗ್ಗದ ಸೊರಬ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ನೀಡುವ ಸಾಧ್ಯತೆ ಇದೆ.
