ಅಗಲಿದ ಸರಳ, ಸಭ್ಯ, ನಿಷ್ಠಾವಂತ ರಾಜಕಾರಣಿಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪಣಜಿ, [ಮಾ.17]: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು.
ಅಮೆರಿಕಾದಿಂದ ಬಂದು ಅನಾರೋಗ್ಯದ ನಡುವೆಯೇ ಪರಿಕ್ಕರ್ ಮೂಗಿಗೆ ಪೈಪ್ ಹಾಕಿಕೊಂಡು ಗೋವಾ ರಾಜ್ಯ ಬಜೆಟ್ ಮಂಡಿಸಿದ್ದರು. ಆದ್ರೆ ಕೆಲ ದಿನಗಳ ಬಳಿಕ ಪರಿಕ್ಕರ್ ಆರೋಗ್ಯ ಮತ್ತೆ ಹದಗೆಟ್ಟಿದ್ದು, ಅವರನ್ನು ಪಣಜಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು [ಭಾನುವಾರ] ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ
ಸರಳ, ಸಭ್ಯ, ನಿಷ್ಠಾವಂತ ರಾಜಕಾರಣಿ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
