ಜಂತಕಲ್ ಅಕ್ರಮ ಗಣಿಗಾರಿಕೆ ಕೇಸಲ್ಲಿ ಬಂಧನ ಭೀತಿಗೆ ಒಳಗಾಗಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಕುಮಾರಸ್ವಾಮಿ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ 7 ದಿನಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿನ್ನಲೆಯಲ್ಲಿ ಇವತ್ತು ಎಚ್ಡಿ ಕುಮಾಸ್ವಾಮಿ ಎಸ್ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ.
ಬೆಂಗಳೂರು(ಮೇ.18): ಜಂತಕಲ್ ಅಕ್ರಮ ಗಣಿಗಾರಿಕೆ ಕೇಸಲ್ಲಿ ಬಂಧನ ಭೀತಿಗೆ ಒಳಗಾಗಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಕುಮಾರಸ್ವಾಮಿ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ 7 ದಿನಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿನ್ನಲೆಯಲ್ಲಿ ಇವತ್ತು ಎಚ್ಡಿ ಕುಮಾಸ್ವಾಮಿ ಎಸ್ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಲಿದ್ದಾರೆ.
ಆರೋಪಿಯಿಂದ ಸಾಕಷ್ಟುಮಾಹಿತಿ ಪಡೆದುಕೊಳ್ಳಬೇಕಿದೆ. ಒಂದು ವೇಳೆ ಜಾಮೀನು ನೀಡಿದರೆ ಆರೋಪಿ ತನಿಖೆಗೆ ಹಾಜರಾಗುವುದಿಲ್ಲ. ಅಲ್ಲದೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಹೀಗಾಗಿ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸರ್ಕಾರ ಪರ ವಕೀಲರು ವಾದಿಸಿದ್ದರು. ಅಂತಿಿಮವಾಗಿ ಕೋರ್ಟ್ 7 ದಿನ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಸರ್ಕಾರಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ಕೊನೆಗೂ ಸಮನ್ಸ್ ಕೈ ಸೇರಿರುವ ಬಗ್ಗೆ ಒಪ್ಪಿಕೊಂಡಿರುವ ಎಚ್ಡಿಕೆ ಇವತ್ತು ಎಸ್ಐಟಿ ತನಿಖಾಧಿಕಾರಿ ಮುಂದೆ ಹಾಜರಾಗಲಿದ್ದಾರೆ. ನನ್ನನ್ನು ರಾಜಕೀಯವಾಗಿ ಹಣಿಯಲು ಸರ್ಕಾರ ಕುತಂತ್ರ ನಡೆಸಿದೆ. ಯಾರೆಲ್ಲಾ ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದಾರೆ ಎಂಬುದು ನನಗೆ ಗೊತ್ತು ಅಂತ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ 3 ತಿಂಗಳೊಳಗೆ ತನಿಖೆ ಮುಗಿಸುವಂತೆ ಸೂಚನೆ ನೀಡಿದ್ದು, ಎಸ್'ಐಟಿ ತನಿಖೆಗೆ ಮುಂದಾಗಿದೆ. ಆದರೆ ಕಳೆದ 7 ವರ್ಷದಿಂದ ಎಸ್ಐಟಿ ಏನು ಮಾಡುತ್ತಿತ್ತು ಅನ್ನೋದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರಶ್ನೆ.
ಎಚ್ಡಿಕೆ ವಿರುದ್ಧದ ಆರೋಪಗಳ ಬಗ್ಗೆ ಇನ್ನಷ್ಟು ಆಕ್ಷೇಪಣೆ ಸಲ್ಲಿಸಲು ಸರ್ಕಾರ ಪರ ವಕೀಲರು ನಿರ್ಧರಿಸಿದ್ದು ಮುಂದಿನ ವಿಚಾರಣೆ ವೇಳೆ ಕೋರ್ಟ್ಗೆ ಸಲ್ಲಿಸಲಿದ್ದಾರೆ. ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರೇ ಸಾವಿರ ವರ್ಷ ಆಯಸ್ಸು ಅನ್ನೋ ಹಾಗೆ ತಾತ್ಕಲಿಕ ರಿಲೀಫ್ ಹೆಚ್ಡಿಕೆಗೆ ಬಂಧನ ಭೂತವನ್ನ ಓಡಿಸಿದೆ. ಆದರೆ ಮುಂದೇನಾಗುತ್ತದೆ ಎನ್ನುವುದೇ ಕುತೂಹಲ ಕೆರಳಿಸಿದೆ.
