ಲೋಕಾಯುಕ್ತ ಸಂಸ್ಥೆಯ ಅಧಿಕಾರಕ್ಕೆ ಕತ್ತರಿ ಹಾಕಿ, ಅದಕ್ಕೆ ಪರ್ಯಾಯವಾಗಿ ಈ ಹಿಂದಿನ ಸರ್ಕಾರ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದು ಮಾಡುವ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.  

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರಕ್ಕೆ ಕತ್ತರಿ ಹಾಕಿ, ಅದಕ್ಕೆ ಪರ್ಯಾಯವಾಗಿ ಈ ಹಿಂದಿನ ಸರ್ಕಾರ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದು ಮಾಡುವ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ಎಸಿಬಿ ರದ್ದು ಮಾಡುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ಜತೆ ಚರ್ಚೆ ನಡೆಸಬೇಕಿದೆ. ಸಮ್ಮಿಶ್ರ ಸರ್ಕಾರ ಇರುವ ಕಾರಣ ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ.

ಮಾಲೋಚನೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು. ಅಲ್ಲದೇ, ಹೈಕೋರ್ಟ್‌ನಲ್ಲಿ ಈ ವಿಚಾರ ವಿಚಾರಣೆ ಹಂತದಲ್ಲಿದೆ. ಇಂತಹ ವೇಳೆಯಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.