ಬೆಂಗಳೂರಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಮತ್ತು ರೇವಣ್ಣ ಮಾತ್ರ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಯಾರೂ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಲೋಕಸಭಾ ಚುನಾವಣೆಗೆ ಇನ್ನೂ ಸಮಯ ಇದೆ, ಆಗ ಪರಿಸ್ಥಿತಿ ನೋಡಿ ಬಳಿಕ ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು(ಡಿ.17): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.