ಕುರಂಗನಿ ಬೆಟ್ಟದಲ್ಲಿ ನಡೆದ ಬೆಂಕಿ ಅವಘಡ : ಸಾವಿನ ಸಂಖ್ಯೆ 9ಕ್ಕೆ ಏರಿಕೆ

First Published 12, Mar 2018, 1:11 PM IST
Kurangani hills forest fire doused death toll reaches 9
Highlights

ತಮಿಳುನಾಡಿನ ಥೇನಿ ಜಿಲ್ಲೆಯ  ಕುರಂಗನಿ ಬೆಟ್ಟಕ್ಕೆ ವಿದ್ಯಾರ್ಥಿಗಳು ಟ್ರಕ್ಕಿಂಗ್ ತೆರಳಿದ್ದ ವೇಳೆ ಉಂಟಾದ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.  ಟ್ರಕ್ಕಿಂಗ್’ಗೆ ತೆರಳಿದ್ದ ವಿದ್ಯಾರ್ಥಿನಿಯರ ರಕ್ಷಣೆಗೆ  ರಕ್ಷಣಾ ಸಚಿವೆ ನಿರ್ಮಾಲ ಸೀತಾರಾಮನ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಬಳಿಕ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು.

ಚೆನ್ನೈ : ತಮಿಳುನಾಡಿನ ಥೇನಿ ಜಿಲ್ಲೆಯ  ಕುರಂಗನಿ ಬೆಟ್ಟಕ್ಕೆ ವಿದ್ಯಾರ್ಥಿಗಳು ಟ್ರಕ್ಕಿಂಗ್ ತೆರಳಿದ್ದ ವೇಳೆ ಉಂಟಾದ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.  ಟ್ರಕ್ಕಿಂಗ್’ಗೆ ತೆರಳಿದ್ದ ವಿದ್ಯಾರ್ಥಿನಿಯರ ರಕ್ಷಣೆಗೆ  ರಕ್ಷಣಾ ಸಚಿವೆ ನಿರ್ಮಾಲ ಸೀತಾರಾಮನ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಬಳಿಕ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು.

ಭಾನುವಾರ ರಾತ್ರಿ ಇಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಟ್ರಕ್ಕಿಂಗ್ ಹೋಗಿದ್ದ ಅನೇಕ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ಈ ವೇಳೆ ರಾತ್ರಿಯೇ ಕೆಲ ವಿದ್ಯಾರ್ಥಿಗಳು ರಕ್ಷಣೆ ಮಾಡಲಾಗಿತ್ತು.  ಅತ್ಯಂತ ಹೆಚ್ಚು ಬೆಂಕಿಯ ಜ್ವಾಲೆ ಆವರಿಸಿಕೊಂಡಿದ್ದು,  ಹೆಲಿಕಾಪ್ಟರ್’ನಲ್ಲಿ ತೆರಳಿ ಮೃತದೇಹಗಳನ್ನು ತರಲಾಗಿತ್ತು.  ಅಲ್ಲದೇ ಇದೇ ವೇಳೆ ಒಂದು ಹೆಲಿಕಾಪ್ಟರ್ ಕೂಡ ಬೆಂಕಿಯಿಂದ ಹಾನಿಗೊಳಗಾಗಿತ್ತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ಇನ್ನು ಇಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಸೂಕ್ತ ಪರಿಹಾರವನ್ನೂ  ನೀಡುವುದಾಗಿಯೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಘೋಷಣೆ ಮಾಡಿದ್ದಾರೆ.

ಸ್ಥಳದಲ್ಲಿ 16 ಕಮಾಂಡೋಗಳು, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್’ಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಗೆ ಇನ್ನೊಂದು ಹೆಲಿಕಾಪ್ಟರ್ ಕೂಡ ತೆರಳಲಿದೆ ಎಂದು ಭಾರತೀಯ ವಾಯುಪಡೆ ಅಧಿಕಾರಿಗಳು ಹೇಳಿದ್ದಾರೆ. ಇದುವರೆಗೂ ಸುಮಾರು 27 ಮಂದಿ ವಿದ್ಯಾರ್ಥಿಗಳನ್ನು ಕಾಡಿನಿಂದ ರಕ್ಷಣೆ ಮಾಡಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರಾದ ಸಿ ವಿಜಯ್ ಭಾಸ್ಕರ್ ಹೇಳಿದ್ದಾರೆ.

loader