ನೆಲಮಂಗಲದಿಂದ ಸ್ಪರ್ಧೆ ಮಾಡಲಿದ್ದಾರಾ ಎಲ್.ಹನುಮಂತಯ್ಯ..?

L Hanumanthaiah May Contest Frome Nelamgala
Highlights

ಜೆಡಿಎಸ್‌ನಿಂದ ಹಾಲಿ ಶಾಸಕ ಡಾ. ಶ್ರೀನಿವಾಸಮೂರ್ತಿ ಅವರನ್ನೇ  ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಅಂಜನಮೂರ್ತಿ ಮತ್ತೆ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದರೂ ಈ ಬಾರಿ ಈ ಕ್ಷೇತ್ರದ ಟಿಕೆಟ್ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ ಅವರಿಗೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ನೆಲಮಂಗಲ :  ಜೆಡಿಎಸ್‌ನಿಂದ ಹಾಲಿ ಶಾಸಕ ಡಾ. ಶ್ರೀನಿವಾಸಮೂರ್ತಿ ಅವರನ್ನೇ  ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಅಂಜನಮೂರ್ತಿ ಮತ್ತೆ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದರೂ ಈ ಬಾರಿ ಈ ಕ್ಷೇತ್ರದ ಟಿಕೆಟ್ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ ಅವರಿಗೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜ್ಯ ನಾಯಕತ್ವವೇ ಹನುಮಂತಯ್ಯ ಅವರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವೊಲಿಸಿದೆ ಎನ್ನಲಾಗುತ್ತಿದೆ. ಇಷ್ಟಾಗಿಯೂ ಸ್ಥಳೀಯರಾದ ಕಮಲಾಕ್ಷಿ ರಾಜಣ್ಣ ಅವರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ.

ಬಿಜೆಪಿಯಿಂದ ಕಳೆದ ಬಾರಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಶಾಸಕ ನಾಗರಾಜ್ ಅವರ ಹೆಸರು ಮುಂಚೂಣಿಯಲ್ಲಿದೆ. ಜತೆಗೆ ಹೊಂಬಯ್ಯ ಎಂಬುವರ ಹೆಸರೂ ಕೇಳಿಬರುತ್ತಿದೆ.

loader