‘ನೀವು ಬಾತ್‌ರೂಮ್‌ನಲ್ಲಿ ಸ್ನಾನ ಮಾಡುವ ವಿಡಿಯೋ ಚಿತ್ರೀಕರಿಸಲಾಗಿದೆ' ರೂ. 20 ಲಕ್ಷ ಹಣ ನೀಡಬೇಕು. ಇಲ್ಲದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ವಾಟ್ಸ್‌ಅಪ್‌ಗಳನ್ನು ಹರಿಯಬಿಡಲಾಗುವುದು ಎಂದು ಬೆದರಿಸಲಾಗಿದೆ.

ಬೆಂಗಳೂರು: ಹಣ ನೀಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗುವುದು ಎಂದು ವೈದ್ಯೆರೊಬ್ಬರಿಗೆ ಬೆದರಿಕೆ ಪತ್ರ ಬಂದಿದ್ದು, ಈ ಸಂಬಂಧ ವೈದ್ಯೆ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯಶವಂತಪುರದ ಎಸ್‌ಬಿಎಂ ಕಾಲೋನಿ ನಿವಾಸಿಯಾಗಿರುವ ವೈದ್ಯೆ ಯಶವಂತಪುರ 1ನೇ ಮುಖ್ಯರಸ್ತೆಯಲ್ಲಿ ಖಾಸಗಿ ಕ್ಲಿನಿಕ್‌ ಹೊಂದಿದ್ದಾರೆ. ಅವರ ಟೇಬಲ್‌ನಲ್ಲಿ ಯಾರೋ ದುಷ್ಕರ್ಮಿಗಳು ಬೆದರಿಕೆ ಪತ್ರವೊಂದನ್ನು ಇಟ್ಟು ಹೋಗಿದ್ದು, ಅದರಲ್ಲಿ ‘ನೀವು ಬಾತ್‌ರೂಮ್‌ನಲ್ಲಿ ಸ್ನಾನ ಮಾಡುವ ವಿಡಿಯೋ ಚಿತ್ರೀಕರಿಸಲಾಗಿದೆ' ರೂ. 20 ಲಕ್ಷ ಹಣ ನೀಡಬೇಕು. ಇಲ್ಲದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ವಾಟ್ಸ್‌ಅಪ್‌ಗಳನ್ನು ಹರಿಯಬಿಡಲಾಗುವುದು ಎಂದು ಬೆದರಿಸಿದ್ದಾರೆ. ವೈದ್ಯೆ ಕೂಡಲೇ ಯಶವಂತಪುರ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.

ಪರಿಚಿತರೇ ಹಣಕ್ಕಾಗಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.