ಮೊಟ್ಟ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಭಾರೀ ಬದಲಾವಣೆ ಕಾಣಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಮೊದಲ ಬಾರಿಗೆ ಮಹಿಳಾ ಸಿಬ್ಬಂದಿ ಬಳಕೆ ಮಾಡಿಕೊಂಡಿದ್ದಾರೆ.
ನವದೆಹಲಿ(ಮೇ.29): ಮೊಟ್ಟ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಭಾರೀ ಬದಲಾವಣೆ ಕಾಣಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಮೊದಲ ಬಾರಿಗೆ ಮಹಿಳಾ ಸಿಬ್ಬಂದಿ ಬಳಕೆ ಮಾಡಿಕೊಂಡಿದ್ದಾರೆ.
ಪ್ರಧಾನಿ ಭದ್ರತೆ ನೋಡಿಕೊಳ್ಳುವ ವಿಶೇಷ ಭದ್ರತಾ ತಂಡದಲ್ಲಿ ಮಹಿಳಾ ಸದಸ್ಯೆ ಕಾರ್ಯನಿರ್ವಹಿಸುತ್ತಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. 1988ರಲ್ಲಿ ಎಸ್ಜಿಪಿ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಮಹಿಳಾ ಭದ್ರತಾ ಸಿಬ್ಬಂದಿ ನೇಮಿಸಿಕೊಂಡಿದ್ದಾರೆ.
ನಾಲ್ಕು ಯೂರೋಪ್ ರಾಷ್ಟ್ರಗಳಾದ ಜರ್ಮನಿ, ಸ್ಪೇನ್, ರಷ್ಯಾ ಹಾಗೂ ಫ್ರಾನ್ಸ್ಗೆ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಇವತ್ತು ಬೆಳಗ್ಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ತಮ್ಮ ಕಾರಿನಲ್ಲಿ ಪುರುಷರ ಭದ್ರತೆ ಸಿಬ್ಬಂದಿಯ ಜೊತೆ ಮಹಿಳಾ ಸಿಬ್ಬಂದಿ ಕಾಣಿಸಿಕೊಂಡಿದ್ದಾರೆ.
