ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೈಯಲ್ಲಿ 2 ಸಾವಿರ ರೂ. ನೋಟು ಹಿಡಿದುಕೊಂಡು ಚೀಟಿಯಲ್ಲಿ ಬರೆಸಿಕೊಳ್ಳುತ್ತಿರುವ ದೃಶ್ಯವನ್ನು ಬಿಜೆಪಿ ಬಿಡುಗಡೆ ಮಾಡಿದೆ.

ಮೈಸೂರು(ಮಾ.06): ರಾಜ್ಯ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಚುನಾವಣೆ ಪ್ರಚಾರದಲ್ಲಿ ಹಣ ಹಂಚಿಕೆ ಆರೋಪ ಎದುರಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಂಡ್ಲುಪೇಟೆ ವಿಧಾನಾಸಭೆ ಕ್ಷೇತ್ರದ ಕಬ್ಬಹಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಹೆಣ್ಣೂರು ಕೇರಿ ಪ್ರದೇಶದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೈಯಲ್ಲಿ 2 ಸಾವಿರ ರೂ. ನೋಟು ಹಿಡಿದುಕೊಂಡು ಚೀಟಿಯಲ್ಲಿ ಬರೆಸಿಕೊಳ್ಳುತ್ತಿರುವ ದೃಶ್ಯವನ್ನು ಬಿಜೆಪಿ ಬಿಡುಗಡೆ ಮಾಡಿದೆ.

ಈ ದೃಶ್ಯದ ಆಧಾರದ ಮೇಲೆ ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಣ ಹಂಚುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಆದರೆ ಇದು ಗುಂಡ್ಲುಪೇಟೆಯಲ್ಲಿ ನಡೆದಿದೆ ಎಂಬುದಕ್ಕೆ ಯಾವುದೇ ಪುರಾವೆಯಿಲ್ಲ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಈ ಆರೋಪವನ್ನು ತಿರಸ್ಕರಿಸಿದ್ದಾರೆ.