ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕಾಂಗ್ರೆಸ್'ನ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಸುವ ನಿರ್ಧಾರ ಕೈಗೊಳ್ಳಬಹುದು. ಕಾಂಗ್ರೆಸ್'ನ ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದ ಬಗ್ಗೆ ಸಾಕಷ್ಟು ಆಕ್ಷೇಪಗಳು ವ್ಯಕ್ತವಾಗಿವೆ.
ಬೆಂಗಳೂರು(ಆ. 31): ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ನಾನೇ ಮೊದಲು ನಿಂತು ಜೈ ಮಹಾರಾಷ್ಟ್ರ ಎನ್ನುತ್ತೇನೆಂದು ವಿವಾದಾಸ್ಪದ ಹೇಳಿಕೆ ನೀಡಿದರೆನ್ನಲಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ಅಧಿಕಾರದಿಂದ ಕೆಳಗಿಳಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಜನಾಭಿಪ್ರಾಯ ರೂಪುಗೊಂಡೀತೆಂಬ ಭಯ ಆ ಪಕ್ಷವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಗೇಟ್'ಪಾಸ್ ಕೊಡಬಹುದೆನ್ನಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕಾಂಗ್ರೆಸ್'ನ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಸುವ ನಿರ್ಧಾರ ಕೈಗೊಳ್ಳಬಹುದು. ಕಾಂಗ್ರೆಸ್'ನ ಕರ್ನಾಟಕ ಉಸ್ತುವಾರಿ ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದ ಬಗ್ಗೆ ಸಾಕಷ್ಟು ಆಕ್ಷೇಪಗಳು ವ್ಯಕ್ತವಾಗಿವೆ. ಬಹುತೇಕ ಹಿರಿಯ ನಾಯಕರು ಹೆಬ್ಬಾಳ್ಕರ್ ಅವರನ್ನು ಕೂಡಲೇ ಕೆಳಗಿಳಿಸಬೇಕೆಂದು ಸೂಚಿಸಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಇದು ಪಕ್ಷದ ತಾತ್ಕಾಲಿಕ ಕ್ರಮವಾಗಿರುತ್ತದೆ. ಕೆಲ ದಿನಗಳ ಬಳಿಕ, ವಿವಾದದ ಬಿಸಿ ಶಮನವಾದ ಬಳಿಕ ಅವರನ್ನು ಮತ್ತೆ ಪದವಿಗೇರಿಸಲಾಗುತ್ತದೆ ಎನ್ನಲಾಗಿದೆ.
