ನಾಡಿನ ವೀರ ವನಿತೆಯರಾದ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಪ್ರತಾಪ್ ಸಿಂಹ ಬೆಂಬಲಿಗರು ಅವಹೇಳನಕಾರಿಯಾಗಿ ಮಾತನಾಡಿ, ಅವಮಾನ ಮಾಡಿರುವುದಕ್ಕೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ನ.30): ನಾಡಿನ ವೀರ ವನಿತೆಯರಾದ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಪ್ರತಾಪ್ ಸಿಂಹ ಬೆಂಬಲಿಗರು ಅವಹೇಳನಕಾರಿಯಾಗಿ ಮಾತನಾಡಿ, ಅವಮಾನ ಮಾಡಿರುವುದಕ್ಕೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರಿಗೆ ಮತ್ತು ಸಂಸದ ಪ್ರತಾಪ್ ಸಿಂಹಗೆ ನಾಚಿಕೆಯಾಗಬೇಕು. ಇತಿಹಾಸ ಗೊತ್ತಿಲ್ಲದೇ ಏನೇನೋ ಮಾತಾಡಿದ್ದಾರೆ. ಇಡೀ ದೇಶಕ್ಕೆ ರಾಜ್ಯಕ್ಕೆ ಗೊತ್ತು. ವೀರ ವನಿತೆ ಓಬವ್ವ, ಕಿತ್ತೂರು ಚೆನ್ನಮ್ಮ ಏನು ಅಂತ. ಬಿಜೆಪಿಯವರು ಇಡೀ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ. ಇದಕ್ಕೆ ತಕ್ಕ ಶಿಕ್ಷೆ ಅನುಭವಿಸಲಿದ್ದಾರೆ. ಕೇಂದ್ರ ಸಚಿವ ಅನಂತ್ ಕುಮಾರ್, ಪ್ರತಾಪ್ ಸಿಂಹ ಸೇರಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ. ಬಿಜೆಪಿಯವರು ಕೇವಲ ರಾಮ ರಾಮ ರಾಮ ಅಂತಿದ್ದಾರೆ. ಮಹಿಳೆಯರಿಗೆ ಅವಮಾನ ಮಾಡುತ್ತಿದ್ದಾರೆ.