ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಬಿಸಿನೆಸ್ ಕ್ಲಾಸ್ ಪ್ರಯಾಣಿಕರಿಗೆ ಲ್ಯಾಪ್ ಟಾಪ್ ಒದಗಿಸುವ ಬಗ್ಗೆ ಚಿಂತಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ತಿಳಿಸಿದ್ದಾರೆ.
ನವದೆಹಲಿ (ಜ.09): ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಬಿಸಿನೆಸ್ ಕ್ಲಾಸ್ ಪ್ರಯಾಣಿಕರಿಗೆ ಲ್ಯಾಪ್ ಟಾಪ್ ಒದಗಿಸುವ ಬಗ್ಗೆ ಚಿಂತಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ತಿಳಿಸಿದ್ದಾರೆ. ಬಹುತೇಕ ಯಾವಾಗಲೂ ಅರ್ಧದಷ್ಟು ಸೀಟುಗಳು ಖಾಲಿಯಿರುವುದರಿಂದ, ಸೀಟುಗಳನ್ನು ತುಂಬುವುದಕ್ಕಾಗಿ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಸಂಸ್ಥೆ ಈ ಪ್ರಸ್ತಾಪವನ್ನಿಟ್ಟಿದೆ.
ಕೆಲವು ಹಳೆಯ ವಿಮಾನಗಳಲ್ಲಿ ಮಾನಿಟರ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸದಿರುವ ಬಗ್ಗೆ ದೂರುಗಳಿರುವುದರಿಂದ ಈ ಕ್ರಮ ಕೈಗೊಳ್ಳಲು ಸಂಸ್ಥೆ ಚಿಂತಿಸಿದೆ ಎಂದಿದ್ದಾರೆ.
