ನವದೆಹಲಿ(ಜ.09): ಅಂಚೆ ಕಚೇರಿ ಠೇವಣಿ, ಎನ್‌ಎಸ್‌ಸಿ, ಕಿಸಾನ್ ವಿಕಾಸ್ ಪತ್ರ ಮುಂತಾದ ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್ ಜೋಡಣೆಗೆ ನೀಡಲಾಗಿದ್ದ ಗಡುವು ಮಾ.31ರ ವರೆಗೆ ವಿಸ್ತರಿಸಲಾಗಿದೆ.

‘ಆಧಾರ್ ನಂಬರ್ ಜೋಡಣೆಗೆ ಡಿ. 31ಕ್ಕಿದ್ದ ಕೊನೆ ದಿನಾಂಕವನ್ನು ಮಾ. 31ರ ವರೆಗೆ ವಿಸ್ತರಿಸಲು  ನಿರ್ಧರಿಸಲಾಗಿದೆ’ ಎಂದು ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈಗಾಗಲೇ ಪ್ಯಾನ್ ಕಾರ್ಡ್ ಸೇರಿದಂತೆ ವಿವಿಧ ಸೇವೆಗಳಿಗೆ ಆಧಾರ್ ಜೋಡಣೆಯನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.