ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರ ಚುಕ್ಕಾಣಿ ಹಿಡಿಯಲು ರಾಜ್ಯದ ಮತದಾರರು ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ನನ್ನ ಕೊನೆಯ ಆಸೆಯನ್ನು ಈಡೇರಿಸುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಕರೆ ನೀಡಿದರು.
ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಚುಕ್ಕಾಣಿ ಹಿಡಿಯಲು ರಾಜ್ಯದ ಮತದಾರರು ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ನನ್ನ ಕೊನೆಯ ಆಸೆಯನ್ನು ಈಡೇರಿಸುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಕರೆ ನೀಡಿದರು. ಜೆಡಿಎಸ್ ಸಮಾವೇಶದಲ್ಲಿ ಅವರು ಮಾತನಾಡಿ 2018ಕ್ಕೆ ವಿಧಾನಸೌಧದಲ್ಲಿ ಜೆಡಿಎಸ್ ಬಾವುಟ ಹಾರಿಸುವುದು ನನ್ನ ಕೊನೆಯ ಆಸೆಯಾಗಿದೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.
ದೇವೇಗೌಡ- ವಿಶ್ವನಾಥ್ ದಿಢೀರ್ ಭೇಟಿ:
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕಾಂಗ್ರೆಸ್ ತೊರೆದಿರುವ ಮಾಜಿ ಸಂಸದ ಎಚ್. ವಿಶ್ವನಾಥ್ ಅವರು ಮೈಸೂರಿನಲ್ಲಿ ಗುರುವಾರ ಭೇಟಿಯಾಗಿದ್ದಾರೆ. ಮೈಸೂರಿನ ಹೊರವಲಯದ ಬೋಗಾದಿಯಲ್ಲಿರುವ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರ ನಿವಾಸದಲ್ಲಿ ಈ ಇಬ್ಬರು ನಾಯಕರು ದಿಢೀರ್ ಚರ್ಚಿಸಿದ್ದಾರೆ. ಭೇಟಿಗೂ ಮುನ್ನ ಮಾತನಾಡಿದ ಗೌಡರು, ವಿಶ್ವನಾಥ್ ಷರತ್ತುರಹಿತರಾಗಿ ಬಂದಲ್ಲಿ ಸ್ವಾಗತಿಸುತ್ತೇವೆ ಎಂದರು.
