ರೆಬೆಲ್ ಆಗಿ ರಾಜೀನಾಮೆ ನೀಡಿದ ಜೆಡಿಎಸ್ ಶಾಸಕರೋರ್ವರು ಬಿಜೆಪಿ ಸೇರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೆ ಸೇರಿಕೊಳ್ಳದಿರಲು ಮನವಿ ಮಾಡಲಾಗಿದೆ.
ಬೆಂಗಳೂರು [ಜು.11] : ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮಾ ಮುಂದುವರಿದಿದೆ. ರಾಜೀನಾಮೆ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಇತ್ತ ರಾಜೀನಾಮೆ ನೀಡಿದ ಕೆಲವರು ಬಿಜೆಪಿ ಸೇರ್ಪಡೆಗೆ ಒಲವು ತೋರುತ್ತಿದ್ದು, ಆದರೆ ಇದಕ್ಕೆ ಬಿಜೆಪಿಗರಿಂದ ವಿರೋಧ ವ್ಯಕ್ತವಾಗುತ್ತಿದೆ.
ಮಹಾಲಕ್ಷ್ಮೀ ಲೇ ಔಟ್ ಕ್ಷೇತ್ರದ ಜೆಡಿಎಸ್ ಶಾಸಕ ಗೋಪಾಲಯ್ಯ ರಾಜೀನಾಮೆ ನೀಡಿ ಮುಂಬೈ ಸೇರಿಕೊಂಡಿದ್ದು, ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವರ ಸೇರ್ಪಡೆಗೆ ಬಿಜೆಪಿ ನಾಯಕರೋರ್ವರು ವಿರೋಧಿಸಿದ್ದಾರೆ.
ಕರ್ನಾಟಕ ರಾಜಕೀಯ ಪ್ರಹಸನದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಗೋಪಾಲಯ್ಯ ಬಿಜೆಪಿಗೆ ಬರುವುದು ಬೇಡವೆಂದು ಮಾಜೀ ಮೇಯರ್ ಬಿಜೆಪಿ ಮುಖಂಡ ಹರೀಶ್ ಹೇಳಿದ್ದು, ಅವರ ಸೇರ್ಪಡೆಗೆ ನಮ್ಮಿಂದ ತೀವ್ರ ವಿರೋಧವಿದೆ ಎಂದಿದ್ದಾರೆ.
ನಮ್ಮ ನಾಯಕರಾದ ಬಿ.ಎಸ್ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದು, ಈ ಮೂಲಕ ಕಾರ್ಯಕರ್ತರ ಹಿತ ಕಾಪಾಡುವಂತೆ ಕೇಳಿಕೊಳ್ಳಲಾಗಿದೆ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ವೈ ಸಕಾರಾತ್ಮಕವಾಗಿ ಸ್ಪಂದಿಸಿದ್ದಾಗಿ ಬಿಜೆಪಿಗ ಹರೀಶ್ ಹೇಳಿದ್ದಾರೆ.
"
