ಸುಪ್ರೀಂಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಪೂರ್ಣಪೀಠಕ್ಕೆ ಮನವಿ ಮಾಡಬೇಕು
ವಿಧಾನಸೌಧ(ಅ.01): ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಬೇಡ ಎಂದು ಸರ್ವ ಪಕ್ಷ ಸಭೆಯಲ್ಲಿ ಬಹುತೇಕ ನಾಯಕರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಯಾವ ರೀತಿಯ ಹೋರಾಟ ನಡೆಸಬೇಕು, ಕಾಂಗ್ರೆಸ್ ಪಾತ್ರವೇನು..? ಮತ್ತು ಬಿಜೆಪಿ ನಾಯಕರು ಹೈಕಮಾಂಡ್ ಮನವೊಲಿಸುವ ಬಗ್ಗೆಯೂ ಮಾತುಕತೆ ನಡೆದಿದೆ.
ಸುಪ್ರೀಂಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಪೂರ್ಣಪೀಠಕ್ಕೆ ಮನವಿ ಮಾಡಬೇಕು. ಕಾವೇರಿ ನಿರ್ವಹಣಾ ಮಂಡಳಿ ರಚನೆಯನ್ನ ತಡೆಹಿಡಿಯಲು ಗರಿಷ್ಠ ಪ್ರಯತ್ನ ಅಗತ್ಯ, ಕೇಂದ್ರ ಸರ್ಕಾರಕ್ಕೂ ರಾಜ್ಯದ ನಿಲುವು ಸ್ಪಷ್ಟಪಡಿಸಿ ಎಂದು ಸರ್ವಪಕ್ಷ ಸಭೆಯಲ್ಲಿ ಹಿರಿಯ ನಾಯಕರು ಸಲಹೆ ನೀಡಿದ್ದಾರೆ.
