ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಕನ್ನಡಿಗರು ಹೋರಾಡುತ್ತಿರುವ ಬೆನ್ನಲ್ಲೇ, ಬ್ಯಾಂಕ್ ನೌಕರರಿಗೆ ಕನ್ನಡ ಕಲಿಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಾಕೀತು ಮಾಡಿದೆ. ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ/ಖಾಸಗಿ ಬ್ಯಾಂಕ್‍ಗಳು ತಮ್ಮ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ. ಎಸ್. ಜಿ. ಸಿದ್ಧರಾಮಯ್ಯರವರು ಎಲ್ಲಾ ಬ್ಯಾಂಕ್‍ ಮುಖ್ಯಸ್ಥರುಗಳಿಗೆ ಪತ್ರ ಬರೆದು ಕೋರಿದ್ದಾರೆ.  

ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಕನ್ನಡಿಗರು ಹೋರಾಡುತ್ತಿರುವ ಬೆನ್ನಲ್ಲೇ, ಬ್ಯಾಂಕ್ ನೌಕರರಿಗೆ ಕನ್ನಡ ಕಲಿಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಾಕೀತು ಮಾಡಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ/ಖಾಸಗಿ ಬ್ಯಾಂಕ್‍ಗಳು ತಮ್ಮ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಪ್ರಥಮ ಪ್ರಾಧಾನ್ಯತೆಯನ್ನು ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ. ಎಸ್. ಜಿ. ಸಿದ್ಧರಾಮಯ್ಯರವರು ಎಲ್ಲಾ ಬ್ಯಾಂಕ್‍ ಮುಖ್ಯಸ್ಥರುಗಳಿಗೆ ಪತ್ರ ಬರೆದು ಕೋರಿದ್ದಾರೆ.

6 ತಿಂಗಳುಗಳ ಒಳಗೆ ಕನ್ನಡದಲ್ಲಿ ವ್ಯವಹರಿಸುವುದನ್ನು ಕಲಿಯಿರಿ ಅಥವಾ ಅಂಥವರನ್ನು ಸೇವೆಯಿಂದ ಬಿಡುಗಡೆ ಮಾಡಿ ಎಂದು ರಾಷ್ಟ್ರೀಯ, ಖಾಸಗಿ ಬ್ಯಾಂಕುಗಳ ಪ್ರಾದೇಶಿಕ ಮುಖ್ಯಸ್ಥರಿಗೆ ಬರೆಯಲಾದ ಪತ್ರದಲ್ಲಿ ಪ್ರೊ. ಎಸ್. ಜಿ. ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಬ್ಯಾಂಕುಗಳಲ್ಲಿನ ಎಲ್ಲಾ ಸೌಲಭ್ಯಗಳು ಸರಳವಾಗಿ ಸುಲಭವಾಗಿ ದೊರೆಯುವಂತಾಗಲು ಎಲ್ಲಾ ಮಾಹಿತಿಗಳು ಕನ್ನಡದಲ್ಲಿಯೇ ಸಿಗಬೇಕು, ಬ್ಯಾಂಕುಗಳು ಮುದ್ರಿಸುವ ನಮೂನೆಗಳು ಕನ್ನಡ ಭಾಷೆಯಲ್ಲಿ ಇರಬೇಕು ಕನ್ನಡ ಭಾಷೆಯನ್ನು ಅನುಷ್ಠಾನಗೊಳಿಸಲು ಪ್ರತಿ ಶಾಖೆಯಲ್ಲಿಯೂ ಕನ್ನಡ ಘಟಕವನ್ನು ತೆರೆಯಬೇಕು, ಸಿಬ್ಬಂದಿ ನೇಮಕಾತಿಯಲ್ಲಿ ಡಾ. ಸರೋಜಿನಿ ಮಹಿಷಿ ವರದಿಯ ಆಶಯವನ್ನು ಪಾಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. 

ಅನ್ಯ ಭಾಷಿಕ ಅಧಿಕಾರಿ/ಸಿಬ್ಬಂದಿ ವರ್ಗದವರು ನೇಮಕಾತಿ ಹೊಂದಿದ ಆರು ತಿಂಗಳೊಳಗೆ ಕನ್ನಡ ಕಲಿಯದಿದ್ದಲ್ಲಿ ಅವರುಗಳನ್ನು ಸೇವೆಯಿಂದ ಬಿಡುಗಡೆಗೊಳಿಸುವ ಮೂಲಕ ಐಬಿಪಿಎಸ್ ನೇಮಕಾತಿ ನಿಯಮಗಳನ್ನು ಪಾಲಿಸಬೇಕೆಂದು ಅವರು ಎಲ್ಲಾ ಬ್ಯಾಂಕುಗಳಿಗೆ ಸೂಚಿಸಿದ್ದಾರೆ.