Asianet Suvarna News Asianet Suvarna News

ಬಿಜೆಪಿ ಸಿಡಿಸಿದ ಬಾಂಬ್ ಠುಸ್! ಸುಳ್ಳು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ: ಸಿಎಂ

ಬಿಜೆಪಿ ನಾಯಕ ಬಿ.ಜೆ.ಪುಟ್ಟಸ್ವಾಮಿ ನನ್ನ ಪುತ್ರ ಡಾ.ಯತೀಂದ್ರ ವಿರುದ್ಧ ಮಾಡಿರುವ ಆರೋಪ ಆಧಾರ ರಹಿತ ಹಾಗೂ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.  ಮುಂದುವರಿದು, ಸುಳ್ಳು ಆರೋಪ ಮಾಡಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಪುತ್ರ ಡಾ.ಯತೀಂದ್ರಗೆ ಸೂಚಿಸಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Legal Action Against Defamers Warns CM

ಬೆಂಗಳೂರು: ಬಿಜೆಪಿ ನಾಯಕ ಬಿ.ಜೆ.ಪುಟ್ಟಸ್ವಾಮಿ ನನ್ನ ಪುತ್ರ ಡಾ.ಯತೀಂದ್ರ ವಿರುದ್ಧ ಮಾಡಿರುವ ಆರೋಪ ಆಧಾರ ರಹಿತ ಹಾಗೂ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದುವರಿದು, ಸುಳ್ಳು ಆರೋಪ ಮಾಡಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವಂತೆ ಪುತ್ರ ಡಾ.ಯತೀಂದ್ರಗೆ ಸೂಚಿಸಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ ಪುತ್ರ ಡಾ.ಯತೀಂದ್ರ ವಿರುದ್ಧ ಬಿಜೆಪಿಯ ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಮಾಡಿರುವ ಆರೋಪ ಆಧಾರ ರಹಿತ ಹಾಗೂ ರಾಜಕೀಯ ಪ್ರೇರಿತ.

ಸಿದ್ದರಾಮಯ್ಯ ಕುಟುಂಬದ ಭ್ರಷ್ಟಾಚಾರ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿಕೊಂಡು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಇಂದು  ಸಿಎಂ ಪುತ್ರ ಡಾ. ಯತೀಂದ್ರ ವಿರುದ್ಧ ಹೊಸ ಜಮೀನು ಹಗರಣದ ದಾಖಲೆಗಳ ಬದಲು ಹಳೆಯ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿಯೇ ಬಿಡುಗಡೆ ಮಾಡಿದ್ದ ದಾಖಲೆಗಳು ಅದಾಗಿವೆ.

ಡಾ. ಯತೀಂದ್ರ ಪಾಲುದಾರಿಕೆಯ ಕಂಪನಿಯಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲ್ಯಾಬ್ ನಡೆಸುತ್ತಿದ್ದ ಕುರಿತ ದಾಖಲೆಗಳಾಗಿದ್ದವು. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್ ಠುಸ್ ಆಗಿದೆ.

ಪತ್ರಿಕಾಗೋಷ್ಠಿಯಲ್ಲೇ ಇದ್ದ ಈಶ್ವರಪ್ಪ ಈ ವಿಚಾರ ತಿಳಿದು ಪೇಚಿಗೆ ಸಿಲುಕಿದಂತಿತ್ತು. ದೂರವಾಣಿ ನೆಪದಲ್ಲಿ ಅಲ್ಲಿಂದ ಎದ್ದುಹೋಗಲೂ ಈಶ್ವರಪ್ಪ ಯತ್ನಿಸಿದ್ದುಂಟು. ಆದರೆ, ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಅವರು ಈಶ್ವರಪ್ಪನವರ ಕೈಹಿಡಿದು ಕುಳ್ಳಿರಿಸಿದರು.

Follow Us:
Download App:
  • android
  • ios