Asianet Suvarna News Asianet Suvarna News

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನ: ಕಾದು ನೋಡಿ ಎಂದ ಸಿಎಂ

ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ವಿಚಾರ ಹಾಗೂ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರಗಳ ಕುರಿತು ಕಾದು ನೋಡುವಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪ್ರಮಾವವಚನ ಸ್ವೀಕಾರ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ವಿಚಾರಕ್ಕಿಂತಲೂ ಪ್ರಮುಖವಾದ ವಿಚಾರಗಳು ಬಹಳಷ್ಟಿವೆ ಎಂದು ಮಾರ್ಮಿಕವಾಗಿ ಹೇಳಿದರು.

Lingayat minority religion status can wait

ಬೆಂಗಳೂರು (ಮೇ. 24): ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ವಿಚಾರ ಹಾಗೂ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರಗಳ ಕುರಿತು ಕಾದು ನೋಡುವಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪ್ರಮಾವವಚನ ಸ್ವೀಕಾರ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ವಿಚಾರಕ್ಕಿಂತಲೂ ಪ್ರಮುಖವಾದ ವಿಚಾರಗಳು ಬಹಳಷ್ಟಿವೆ ಎಂದು ಮಾರ್ಮಿಕವಾಗಿ ಹೇಳಿದರು.

ರಾಜ್ಯದ ಜನರ ಸಮಸ್ಯೆ ಬಗೆಹರಿಸುವುದು ತಮ್ಮ ಮೊದಲ ಆದ್ಯತೆಯಾಗಿದ್ದು, ಪ್ರತೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಸ್ಥಾನಮಾನದ ವಿಚಾರ ಅಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಈ ವಿಚಾರವಾಗಿ ಯಾರೇ ಆದರೂ ಹೋರಾಟಕ್ಕೆ ಇಳಿಯುವ ಅಗತ್ಯವಿಲ್ಲ ಎಂದಿರುವ ಸಿಎಂ, ಈ ಕುರಿತು ಎರಡೂ ಬಣಗಳ ಜೊತೆ ಚರ್ಚೆಗೆ ಸಿದ್ದವಿರುವುದಾಗಿ ಸಂದೇಶ ರವಾನಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ  ಹಿಂದಿನ ಸರ್ಕಾರ ಕೈಗೊಂಡ ನಿರ್ಧಾರಗಳು ಮತ್ತು ಅವುಗಳ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದ ಬಳಿಕವಷ್ಟೇ ಮುಂದುವರೆಯುವುದಾಗಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಆದರೆ ಪ್ರತಯೇಕ ಧರ್ಮ ಮತ್ತು ಅಲ್ಪಸಂಖ್ಯಾತ ಸ್ಥಾನದ ಕುರಿತು ತಮ್ಮ ಸರ್ಕಾರ ಆತುರದ ನಿರ್ಧಾರ ಕೈಗೊಳ್ಳು ಸಿದ್ದವಿಲ್ಲ ಎಂದೂ ಸಿಎಂ ಸ್ಪಷ್ಟಪಡಿಸಿದ್ದಾರೆ.

Follow Us:
Download App:
  • android
  • ios