ಲಿಂಗಾಯತ ಧರ್ಮ: 14ಕ್ಕೆ ಸಂಪುಟದಲ್ಲಿ ತೀರ್ಮಾನ?

First Published 11, Mar 2018, 7:57 AM IST
Lingayatha Dharama Issue
Highlights

ತೀವ್ರ ಪರ-ವಿರೋಧಕ್ಕೆ ಕಾರಣವಾಗಿರುವ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಚರ್ಚಿಸಲು ಮಾ.14ರಂದು ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಸಭೆಯಲ್ಲಿ ಪ್ರತ್ಯೇಕ ಧರ್ಮದ ಕುರಿತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜಯಚಂದ್ರ ತಿಳಿಸಿದರು.

ಹುಬ್ಬಳ್ಳಿ : ತೀವ್ರ ಪರ-ವಿರೋಧಕ್ಕೆ ಕಾರಣವಾಗಿರುವ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಚರ್ಚಿಸಲು ಮಾ.14ರಂದು ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಸಭೆಯಲ್ಲಿ ಪ್ರತ್ಯೇಕ ಧರ್ಮದ ಕುರಿತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜಯಚಂದ್ರ ತಿಳಿಸಿದರು.

ನಗರದಲ್ಲಿ ಶನಿ​ವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಚಿವರಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ ಅಥವಾ ಗೊಂದಲಗಳಾಗಲಿ ಇಲ್ಲ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿ ಈ ಬಾರಿ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಗುರುವಾರ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲೇ ಪ್ರಸ್ತಾಪಕ್ಕೆ ಬಂದಿತ್ತಾದರೂ ಈ ಕುರಿತು ಸಚಿವರ ನಡುವೆ ಸೃಷ್ಟಿಯಾದ ಭಿನ್ನಾಭಿಪ್ರಾಯದಿಂದಾಗಿ ನಿರ್ಧಾರವನ್ನು ಮುಂದಿನ ಸಭೆಗೆ ಮುಂದೂಡಲಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮ ಹಾಗೂ ಕನ್ನಡ ಧ್ವಜದ ವಿಚಾರವಾಗಿಯೇ ಅಂದು ಕರೆದಿದ್ದ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಪರ-ವಿರುದ್ಧ ಸಚಿವರು ಪರಸ್ಪರ ವಾಗ್ವಾದಕ್ಕಿಳಿದು ಕೊನೆಗೆ ಕೆಲವರು ರಾಜೀನಾಮೆ ನೀಡಲೂ ಮುಂದಾಗಿದ್ದರು ಎಂದು ಭಾರೀ ಸುದ್ದಿಯಾಗಿತ್ತು.

loader