ನಾಸಿಕ್‌ :  ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಹಾಗೂ ಪ್ರತ್ಯೇಕ ಧರ್ಮ ಧರ್ಮ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ನಾಸಿಕ್‌ನಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.

ಲಿಂಗಾಯತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಾಸಿಕ್‌, ಧುಳೆ, ಜಳಗಾಂವ್‌, ಅಹಮದ್‌ನಗರ ಹಾಗೂ ನಂದೂರ್‌ಬಾರ್‌ ಜಿಲ್ಲೆಗಳ ಲಿಂಗಾಯತರು ಪಾಲ್ಗೊಂಡಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

‘ಮಹಾರಾಷ್ಟ್ರದ ಜನಸಂಖ್ಯೆಯಲ್ಲಿ ಲಿಂಗಾಯತರ ಪ್ರಮಾಣ ಶೇ.9ರಷ್ಟಿದೆ. ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಲಿಂಗಾಯತರಿಗೆ ಸವಲತ್ತು ಸಿಗಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.