ನಗರ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೆ ನಡೆಸುತ್ತಿರುವ ಲೈವ್‌ಬ್ಯಾಂಡ್‌ಗಳನ್ನು ಮುಚ್ಚುವಂತೆ ಸೂಚಿಸಿ ನೋಟಿಸ್ ಜಾರಿಗೊಳಿಸಿರುವ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ನೀಡಿದೆ. 

ಬೆಂಗಳೂರು : ನಗರ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೆ ನಡೆಸುತ್ತಿರುವ ಲೈವ್‌ಬ್ಯಾಂಡ್‌ಗಳನ್ನು ಮುಚ್ಚುವಂತೆ ಸೂಚಿಸಿ ನೋಟಿಸ್ ಜಾರಿಗೊಳಿಸಿರುವ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ನೀಡಿದೆ. 

ಪರವಾನಗಿ ಹೊಂದಿರದ ಹಿನ್ನೆಲೆಯಲ್ಲಿ ವಹಿವಾಟು ನಿಲ್ಲಿಸುವಂತೆ ಸೂಚಿಸಿ ಲೈವ್‌ಬಾಂಡ್ ನಡೆಸುತ್ತಿರುವ ನಗರದ ನರಸಿಂಹರಾಜ ರಸ್ತೆಯ ಮೆಸರ್ಸ್ ಲವರ್ಸ್ ನೈಟ್ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್, ಕೆ.ಜಿ.ರಸ್ತೆಯ ಕೋಸ್ಟರಿಕಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ರೆಸಿಡೆನ್ಸಿ ರಸ್ತೆ ನರ್ತಕಿ ಬಾರ್ ಅಂಡ್ ರೆಸ್ಟೋರೆಂಟ್‌ಗೆ ನೋಟಿಸ್ ಜಾರಿಗೊಳಿಸಲಾಗಿತ್ತು. 

ಈ ನೋಟಿಸ್ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿತ್ತು. ಪೊಲೀಸ್ ಆಯುಕ್ತರು, ಕಲಾಸಿಪಾಳ್ಯ, ಎ.ಜೆ.ಪಾರ್ಕ್, ಅಶೋಕ ನಗರ ಠಾಣೆಯ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ಬುಧವಾರಕ್ಕೆ ವಿಚಾರಣೆ ಮುಂದೂಡಿತು.

(ಸಾಂದರ್ಬಿಕ ಚಿತ್ರ]