ಮೈಸೂರು ಅರಮನೆ ಮುಂಭಾಗ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಮೈಸೂ​ರು, ಅ. 11: ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬೇಡಿ. ನಿಮ್ಮೊಂದಿಗೆ ನಾವಿದ್ದೇವೆ. ತಾತ್ಕಾಲಿವಾಗಿ, ಶೋಕಿಗಾಗಿ, ನಿಮ್ಮನ್ನು ಮೆಚ್ಚಿಸಲು ಸಲುವಾಗಿ .45 ಸಾವಿರ ಕೋಟಿ ಸಾಲ ಮನ್ನಾ ಮಾಡಿಲ್ಲ. ನ.1ರಿಂದ ಸಾಲಮನ್ನಾ ಹಣ ಹಂತ ಹಂತವಾಗಿ ಬಿಡುಗಡೆ ಆಗುತ್ತಾ ಹೋಗುತ್ತದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೈಸೂರು ಅರಮನೆ ಮುಂಭಾಗ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬುಧವಾರ ಸಂಜೆ ಚಾಲನೆದ ಅವರು, ರೈತರು ಯಾವುದೇ ಕಾರಣಕ್ಕೂ ದುಡಿಕಿನ ನಿರ್ಧಾರ ಕೈಗೊಳ್ಳಬಾರದು. ಸರ್ಕಾರ ನಿಮ್ಮೊಂದಿಗೆ ಇದೆ ಎಂದರು.

ಬೆಂಗಳೂರಿನಲ್ಲಿ ಮೀಟರ್‌ ಬಡ್ಡಿ ಮಾಡುವವರ ವಿರುದ್ಧ ಕ್ರಮ ವಹಿಸಲಾಗಿದ್ದು, 15 ಕಡೆ ದಾಳಿ ನಡೆಸಿ .1.50 ಕೋಟಿ ವಶಪಡಿಸಿಕೊಳ್ಳಲಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶದ ಜನ ಯಾವುದಕ್ಕೂ ಹೆದರಬೇಡಿ. ನಿಮಗಾಗಿ ನಾವಿದ್ದೇವೆ ಎಂದು ಅಭಯ ನೀಡಿದರು.