ಪುರಸಭೆ, ನಗರಸಭೆಯಲ್ಲೂ ಬಿಜೆಪಿ ದೂರ ಇಡಲು ಕಾಂಗ್ರೆಸ್ ಜೊತೆ ಮೈತ್ರಿ: ದೇವೇಗೌಡ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 3, Sep 2018, 8:07 PM IST
Local body election Deve gowda reaction about results
Highlights

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇ ಗೌಡ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 

ಹಾಸನ(ಸೆ.03): ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಅಧಿಕಾರ ಗದ್ದುಗೆ ಹಿಡಿಯಲು ಪೈಪೋಟಿ ಜೋರಾಗಿದೆ. ಅತಂತ್ರ ಫಲಿತಾಂಶ ಹೊರಬಿದ್ದ ಜಿಲ್ಲೆಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಗೆ ಮುಂದಾಗಿದೆ. ಈ ಕುರಿತು ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಸೂಚನೆ ನೀಡಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಹಾಸನದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡ, ಬಿಜೆಪಿ ದೂರ ಇಡಲು ಸಾಧ್ಯವಿರೋ ಎಲ್ಲಾ ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದಿದ್ದಾರೆ. ಬೇರೆ ಕಡೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರವಾಗಿ ಅಧಿಕಾರ ರಚಿಸಲಿದೆ. ಈ ಮೂಲಕ ಬಿಜೆಪಿ ಹೊರಗಿಡಲಿದ್ದೇವೆ. ಆದರೆ ಸದ್ಯ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಜೊತೆ ಇನ್ನು ಮಾತುಕತೆ ನಡೆಸಿಲ್ಲ ಎಂದು ದೇವೇಗೌಡ ಹೇಳಿದ್ದಾರೆ.

ಅತಂತ್ರ ಫಲಿತಾಂಶ ಹೊರಬಿದ್ದ ಜಿಲ್ಲೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತೇವೆ. ಇದು ನನ್ನ ಅಭಿಪ್ರಾಯ ಎಂದು ದೇವೇಗೌಡ ಹೇಳಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಎರಡೂ ಬೇರೆ ಬೆೇರೆ. ಈ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲ್ಲ ಎಂದಿದ್ದಾರೆ. ಇದೇ ವೇಳೆ ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್  ಮತ್ತು ಜಾರಕಿಹೊಳಿ ಕುಟುಂಬದಲ್ಲಿ ಕಲಹ ಏರ್ಪಟ್ಟಿರುವ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಎಂದಿದ್ದಾರೆ. 

ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ದೇವೇಗೌಡ, ಸಿದ್ದರಾಮಯ್ಯ ಜೊತೆ ಚರ್ಚಿಸಲಿದ್ದೇನೆ ಎಂದಿದ್ದಾರೆ. ಈ ಹಿಂದೆ ಮೂರನೇ ಶ್ರಾವಣದ ಬಳಿಕ ಸಂಪುಟ ವಿಸ್ತರಣೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಕುರಿತು ಅಂತಿನ ನಿರ್ಧಾರ ಕೈಗೊಂಡಿಲ್ಲ ಎಂದರು.
 

loader